×
Ad

ವಿಧಾನಸಭಾ ಚುನಾವಣೆ: ಅಭ್ಯರ್ಥಿ ಬೆಂಬಲಿಸುವ ಬಗ್ಗೆ ಸುನ್ನಿ ನಾಯಕರ ಸಭೆ ?

Update: 2018-05-10 23:23 IST

ಮಂಗಳೂರು, ಮೇ 10 : ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಬೆಂಬಲಿಸುವ ಕುರಿತು ಜಿಲ್ಲೆಯ ಸುನ್ನಿ ನಾಯಕರು ಗುರುವಾರ ಮಹತ್ವದ ಸಭೆಯೊಂದನ್ನು ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಸಭೆಯ ಬಗ್ಗೆ ಮಾಧ್ಯಮಗಳಿಗೆ ಯಾವುದೇ ಅಧಿಕೃತ ಪ್ರಕಟಣೆ ನೀಡಲಾಗಿಲ್ಲ. 

ಆದರೆ ಸಭೆಯಲ್ಲಿ ಜಿಲ್ಲೆಯ ವಿವಿಧ ಕ್ಷೇತ್ರಗಳು ಅದರಲ್ಲೂ ಕೆಲವು ಭಿನ್ನಾಭಿಪ್ರಾಯಗಳು ಇವೆ ಎಂದು ಹೇಳಲಾಗಿರುವ ಮಂಗಳೂರು ವಿಧಾನಸಭಾ ಕ್ಷೇತ್ರದ ಕುರಿತು ಸವಿವರವಾಗಿ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.

ಸುನ್ನಿ ಸಂಘಟನೆಗಳು ಕೆಲವು ನಿರ್ದಿಷ್ಟ ಅಭ್ಯರ್ಥಿಗಳನ್ನು ಸೋಲಿಸಲು ಕರೆ ನೀಡಿವೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ. ಭಿನ್ನಾಭಿಪ್ರಾಯಕ್ಕೆ ಕಾರಣವಾಗಿರುವ ವಿಷಯಗಳ ಬಗ್ಗೆ ಸಮಗ್ರವಾಗಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ. ಆದರೆ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದ ಬಗ್ಗೆ ಸಂಘಟನೆಯ ನಾಯಕರು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಸುನ್ನಿ ಜಂ ಇಯ್ಯತುಲ್ ಉಲಮಾದ ರಾಜ್ಯಾಧ್ಯಕ್ಷ ಖಾಝಿ ಬೇಕಲ ಇಬ್ರಾಹಿಂ ಮುಸ್ಲಿಯಾರ್ ನೇತೃತ್ವದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಪ್ರಬಲ ಜಾತ್ಯತೀತ ಅಭ್ಯರ್ಥಿಯನ್ನು ಬೆಂಬಲಿಸಲು ಕರೆ ನೀಡಿದ್ದು ಇಲ್ಲಿ ಗಮನಾರ್ಹ. ಆ ಬಳಿಕ ಮತ್ತೆ ಸುನ್ನಿ ನಾಯಕರು ಗುರುವಾರ  ಬೆಂಗಳೂರಿನ ಪ್ರಮುಖ ಸುನ್ನಿ ವಿದ್ವಾಂಸರೊಬ್ಬರ ನೇತೃತ್ವದಲ್ಲಿ  ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಜಾತ್ಯತೀತ ಮತಗಳು ವಿಭಜನೆ ಆಗದಂತೆ ತಡೆಯುವ ನಿಟ್ಟಿನಲ್ಲಿ ಈ ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News