ಅರ್ಕುಳ: ರಸ್ತೆ ಅಪಘಾತಕ್ಕೆ ಬೈಕ್ ಸವಾರ ಮೃತ್ಯು
Update: 2018-05-11 16:34 IST
ಫರಂಗಿಪೇಟೆ, ಮೇ 11: ಲಾರಿ ಬೈಕ್ ನಡುವೆ ಅಪಘಾತ ಸಂಭವಿಸಿ, ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಹಿಂದಿನಿಂದ ಬಂದ ಕಾರು ಚಲಿಸಿದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಮೃತಪಟ್ಟ ಘಟನೆ ಫರಂಗಿಪೇಟೆಯ ಅರ್ಕುಳದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಫರಂಗಿಪೇಟೆಯ ಉಮರ್ (52) ಮೃತರು ಎಂದು ಗುರುತಿಸಲಾಗಿದೆ. ಅವರು ಪತ್ನಿ, ಓರ್ವ ಪುತ್ರ, ಪುತ್ರಿ ಹಾಗು ಬಂಧುಬಳಗವನ್ನು ಅಗಲಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.