ಬೆಂಗಳೂರಿನ 26 ಕ್ಷೇತ್ರ: ನಾಲ್ಕು ಕೇಂದ್ರಗಳಲ್ಲಿ ಮತ ಎಣಿಕೆ

Update: 2018-05-11 13:58 GMT

ಬೆಂಗಳೂರು, ಮೇ 11: ಹಾಲಿ ಶಾಸಕ ಬಿ.ಎನ್.ವಿಜಯಕುಮಾರ್ ನಿಧನದಿಂದಾಗಿ ಜಯನಗರ ವಿಧಾನಸಭಾ ಕ್ಷೇತ್ರ ಹಾಗೂ ವೋಟರ್ ಐ.ಡಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಆರ್.ಆರ್ ನಗರದ ಚುನಾವಣೆ ಮುಂದೂಡಿದ್ದು, ಇನ್ನುಳಿದ 26 ಕ್ಷೇತ್ರಗಳ ಮತ ಎಣಿಕೆ ಕಾರ್ಯಕ್ಕಾಗಿ ನಾಲ್ಕು ಕೇಂದ್ರಗಳನ್ನು ಚುನಾವಣಾ ಆಯೋಗ ಸಿದ್ಧಪಡಿಸಿದೆ.

ಶಿವಾಜಿನಗರ, ಶಾಂತಿನಗರ, ಗಾಂಧಿನಗರ, ರಾಜಾಜಿನಗರ, ಚಾಮರಾಜಪೇಟೆ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು ಬಸವನಗುಡಿಯಲ್ಲಿರುವ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ನಡೆಯಲಿದೆ.

ಕೆ.ಆರ್.ಪುರ, ಮಹಾಲಕ್ಷ್ಮಿಲೇಔಟ್, ಮಲ್ಲೇಶ್ವರಂ, ಹೆಬ್ಬಾಳ, ಪುಲಿಕೇಶಿನಗರ, ಸರ್ವಜ್ಞನಗರ, ಸಿ.ವಿ.ರಾಮನ್‌ನಗರ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ನಡೆಯಲಿದೆ.

ಗೋವಿಂದರಾಜನಗರ, ವಿಜಯನಗರ, ಬಸವನಗುಡಿ, ಪದ್ಮನಾಭನಗರ, ಬಿಟಿಎಂ ಲೇಔಟ್, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು ಜಯನಗರ ನಾಲ್ಕನೆ ಟಿ ಬ್ಲಾಕ್‌ನಲ್ಲಿರುವ ಎಸ್‌ಎಸ್‌ಎಂಆರ್‌ವಿ ಪಿಯು ಕಾಲೇಜಿನಲ್ಲಿ ನಡೆಯಲಿದೆ.

ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ ಹಾಗೂ ಆನೇಕಲ್ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು ಪಿ.ಶೇಷಾದ್ರಿ ರಸ್ತೆಯಲ್ಲಿರುವ ಸ್ವಾತಂತ್ರ ಉದ್ಯಾನವನದ ಎದುರಿರುವ ಮಹಾರಾಣಿ ಕಲೆ ಮತ್ತು ವಿಜ್ಞಾನ ಕಾಲೇಜಿನಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News