×
Ad

ವಿದ್ವತ್ ಹಲ್ಲೆ ಪ್ರಕರಣ: ನಲಪಾಡ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Update: 2018-05-11 21:12 IST

ಬೆಂಗಳೂರು, ಮೇ 11: ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಂಧಿತನಾಗಿರುವ ಶಾಸಕ ಎನ್.ಎ. ಹಾರಿಸ್ ಪುತ್ರ ಮುಹಮ್ಮದ್ ನಲಪಾಡ್ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ.

ಪ್ರಕರಣ ಸಂಬಂಧ ಬಂಧಿತರಾಗಿದ್ದ ನಲಪಾಡ್ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮೇ 11ಕ್ಕೆ ಅಂತ್ಯವಾಗಿದ್ದು, ಶುಕ್ರವಾರ ಬೆಂಗಳೂರಿನ 1ನೆ ಎಸಿಎಂಎಂ ನ್ಯಾಯಾಲಯದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಆರೋಪಿಗಳನ್ನುದ್ದೇಶಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ಮೇ 25ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ನಲಪಾಡ್ ಮತ್ತು ಸಹಚರರು ಇನ್ನೂ 14 ದಿನ ನ್ಯಾಯಾಂಗ ಬಂಧನದಲ್ಲಿಯೇ ಇರಬೇಕಿದೆ. ಆರೋಪಿಗಳ ವಿರುದ್ಧ 60 ದಿನಗಳೊಳಗೆ ಆರೋಪಪಟ್ಟಿ ಸಲ್ಲಿಸಲು ಪೋಲೀಸರು ವಿಫಲವಾಗಿದ್ದ ಕಾರಣ ನ್ಯಾಯಾಲಯ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮೇ 11ರವರೆಗೆ ವಿಸ್ತರಣೆಗೊಂಡಿತ್ತು.

ನಲಪಾಡ್ ಹಾಗೂ ಸಹಚರರು ಫೆ.17ರಂದು ಬೆಂಗಳೂರಿನ ಯು.ಬಿ.ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News