×
Ad

ಕಾಂಗ್ರೆಸ್ ಮುಖಂಡರ ಮತದಾನ ಕೇಂದ್ರದ ವಿವರ

Update: 2018-05-11 21:17 IST

ಬೆಂಗಳೂರು, ಮೇ 11: ಮುಖ್ಯಮಂತ್ರಿ ಸಿದ್ದರಾಮಯ್ಯ ಮೇ 12ರಂದು ವರುಣಾ ವಿಧಾನಸಭಾ ಕ್ಷೇತ್ರದ ತಮ್ಮ ಸ್ವಗ್ರಾಮ ಸಿದ್ದರಾಮನ ಹುಂಡಿಯ ಮತಗಟ್ಟೆಯಲ್ಲಿ ಬೆಳಗ್ಗೆ 11 ಗಂಟೆಗೆ ಮತ ಚಲಾವಣೆ ಮಾಡಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೆಗ್ಗೆರೆ ಸರಕಾರಿ ಪ್ರಾಥಮಿಕ ಪಾಠ ಶಾಲೆಯಲ್ಲಿರುವ ಮತಗಟ್ಟೆಯಲ್ಲಿ ಬೆಳಗ್ಗೆ 7 ಗಂಟೆಗೆ ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಗುಲ್ಬರ್ಗ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಸವನಗರ ಸಮುದಾಯ ಭವನದಲ್ಲಿ ಬೆಳಗ್ಗೆ 11 ಗಂಟೆಗೆ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ಮತಗಟ್ಟೆಯಲ್ಲಿ ಮಧ್ಯಾಹ್ನ 12.30ಕ್ಕೆ ಮತ ಚಲಾಯಿಸಲಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದಿನೇಶ್‌ಗುಂಡೂರಾವ್ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಆರ್‌ಟಿ ನಗರದಲ್ಲಿ ಮಧ್ಯಾಹ್ನ 12.30ಕ್ಕೆ, ವಿಜಯಪುರ ಜಿಲ್ಲೆಯ ಬೀಳಗಿ ವಿಧಾನಸಭಾ ಕ್ಷೇತ್ರದ ಸರಕಾರಿ ಶಾಲೆಯಲ್ಲಿ ಸಂಜೆ 4.50ಕ್ಕೆ ಎಸ್.ಆರ್.ಪಾಟೀಲ್ ಮತ ಚಲಾಯಿಸಲಿದ್ದಾರೆ.

ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ವೀರಪ್ಪಮೊಯ್ಲಿ ಬೆಳಗ್ಗೆ 7 ಗಂಟೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಸ್ವರ್ಣ ಜಯಂತಿ ರೋಜ್‌ಗಾರ್ ಕಚೇರಿ, ಸಂಸದ ಕೆ.ಎಚ್.ಮುನಿಯಪ್ಪ ಬೆಳಗ್ಗೆ 8.30ಕ್ಕೆ ಕೋಲಾರ ವಿಧಾನಸಭಾ ಕ್ಷೇತ್ರದ ಹಾರೋಹಳ್ಳಿ, ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಬೆಳಗ್ಗೆ 10 ಗಂಟೆಗೆ ಬಿಜಾಪುರ ನಗರದ ಸಿದ್ಧೇಶ್ವರ ಚಿತ್ರಕಲಾ ಮಂದಿರ, ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ಬೆಳಗ್ಗೆ 9 ಗಂಟೆಗೆ ಗದಗ ವಿಧಾನಸಭಾ ಕ್ಷೇತ್ರದ ಹುಲಿಕೋಟೆಯ ಸರಕಾರಿ ಮಾದರಿ ಬಾಲಕರ ಶಾಲೆಯಲ್ಲಿ ಮತ ಚಲಾಯಿಸಲಿದ್ದಾರೆ.

ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವಿಜಯನಗರದಲ್ಲಿ ಬೆಳಗ್ಗೆ 8 ಗಂಟೆಗೆ ಕೆಪಿಸಿಸಿ ಮಹಿಳಾ ವಿಭಾಗದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಬೆಳಗ್ಗೆ 7.30ಕ್ಕೆ ನಂದಿನಿ ಲೇಔಟ್‌ನ ಕೆಎಂಡಬ್ಲು ಶಾಲೆಯಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಹಾಗೂ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಚ್.ಎಸ್.ಮಂಜುನಾಥ್ ಬೆಳಗ್ಗೆ 11.30ಕ್ಕೆ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಮಂಜುನಾಥ ನಗರದಲ್ಲಿರುವ ಬ್ರೈಟ್ ಹಾರಿಜನ್ ಶಾಲೆಯಲ್ಲಿ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಕೆ.ಈ.ರಾಧಾಕೃಷ್ಣ ಬೆಳಗ್ಗೆ 7.30ಕ್ಕೆ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಜೆ.ಸಿ.ನಗರದಲ್ಲಿರುವ ನ್ಯೂ ಆಕ್ಸ್‌ಫರ್ಡ್ ಶಾಲೆಯಲ್ಲಿ ಹಾಗೂ ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ ಕೆ.ಆರ್.ಪುರ ಕ್ಷೇತ್ರದ ಹೊರಮಾವುನಲ್ಲಿರುವ ದೇವಮಾತಾ ಸೆಂಟ್ರಲ್ ಶಾಲೆಯಲ್ಲಿ ಮತ ಚಲಾಯಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News