×
Ad

ಬೆಂಗಳೂರು: ಹೃದಯಾಘಾತದಿಂದ ಚುನಾವಣಾ ಸಿಬ್ಬಂದಿ ಮೃತ್ಯು

Update: 2018-05-11 21:19 IST

ಬೆಂಗಳೂರು, ಮೇ 11: ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವಿಜಯಪುರದ ಸೈನಿಕ ಶಾಲೆಯಲ್ಲಿ ನಡೆದಿದೆ.

ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಡಿ ದರ್ಜೆ ನೌಕರನಾಗಿ ಕೆಲಸ ಮಾಡುತ್ತಿರುವ ವಿಠ್ಠಲ್ ಕುರ್ಲೆ(52) ಮೃತಪಟ್ಟ ಸಿಬ್ಬಂದಿಯಾಗಿದ್ದಾರೆ. ಮತಯಂತ್ರಗಳನ್ನು ಹಂಚಿಕೆ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಗಾಂಧಿಚೌಕ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News