ಮೈಸೂರು: ಅರೆಬೆಂದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
Update: 2018-05-11 21:55 IST
ಮೈಸೂರು,ಮೇ.11: ಚಾಮುಂಡಿ ಬೆಟ್ಟದಿಂದ ಉತ್ತನಹಳ್ಳಿಗೆ ಹೋಗುವ ಮಾರ್ಗ ಮಧ್ಯೆ ವ್ಯಕ್ತಿಯೋರ್ವರ ಅರೆಬೆಂದ ಮೃತದೇಹ ಪತ್ತೆಯಾಗಿದೆ.
ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿಯನ್ನು ವಾಜಮಂಗಲ ನಿವಾಸಿ ಕಿರಣ್ ಎಂದು ಗುರುತಿಸಲಾಗಿದ್ದು, ಇಂದು ಬೆಳಿಗ್ಗೆ ದಾರಿ ಹೋಕರು ಹೊಗೆ ಬರುತ್ತಿರುವುದನ್ನು ಗಮನಿಸಿ ಹತ್ತಿರ ಹೋಗಿ ನೋಡಿದಾಗ ವ್ಯಕ್ತಿ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೂಡಲೇ ಕೆ.ಆರ್.ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಕೆ.ಆರ್.ಇನ್ಸಪೆಕ್ಟರ್ ಮಹದೇವಸ್ವಾಮಿ, ಸಬ್ ಇನ್ಸ್ ಪೆಕ್ಟರ್ ಸುನಿಲ್ ಮತ್ತಿತರ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತದೇಹದ ಬಳಿಯೇ ಆತನ ಪರಿಚಯ ತಿಳಿಸುವ ದಾಖಲೆ ಲಭ್ಯವಾದ ಕಾರಣ ಕಿರಣ್ ಎಂದು ಹೇಳಲಾಗಿದೆ. ಇದು ವೈಯುಕ್ತಿಕ ದ್ವೇಷದಿಂದ ನಡೆದ ಕೊಲೆಯೋ, ಅಥವಾ ಆತನೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೋ ಎನ್ನುವ ಕುರಿತು ತನಿಖೆ ನಡೆಯಬೇಕಿದೆ. ಮೃತದೇಹವನ್ನು ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.