×
Ad

ಪೇಶಾವರದಲ್ಲಿ ಸ್ಫೋಟ: ಒಂದೇ ಕುಟುಂಬದ ಐವರ ಸಾವು

Update: 2018-05-11 22:04 IST

ಪೇಶಾವರ, ಮೆ 11: ಪಾಕಿಸ್ತಾನದ ಪೇಶಾವರ ನಗರದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಸ್ಫೋಟವೊಂದರಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ ಹಾಗೂ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಬಿಲಾಲ್ ಪಟ್ಟಣದ ಹೊಟೇಲೊಂದರ ಒಳಗೆ ಸಂಭವಿಸಿದ ಸ್ಫೋಟಕ್ಕೆ ಸ್ಫೋಟ ಸಲಕರಣೆ ಮತ್ತು ಅನಿಲ ಸೋರಿಕೆ ಕಾರಣವಾಗಿರಬಹುದು ಎಂದು ಹೇಳಲಾಗಿದೆ. ಮೃತರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ.

ಹೊಟೇಲ್‌ನ ನಾಲ್ಕನೇ ಮಹಡಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News