ಸಿದ್ದರಾಮನಹುಂಡಿಯಲ್ಲಿ ಸಿಎಂ ಸಿದ್ದರಾಮಯ್ಯ ಮತದಾನ
Update: 2018-05-12 13:53 IST
ಮೈಸೂರು,ಮೇ 12: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ತಮ್ಮ ಹಕ್ಕನ್ನು ಮತ ಚಲಾಯಿಸಿದರು.
ಸಿಎಂ ಸಿದ್ದರಾಮಯ್ಯನವರು ಪುತ್ರ ಡಾ. ಯತೀಂದ್ರ ಜೊತೆ ಸಿದ್ದರಾಮಯ್ಯನ ಹುಂಡಿಯ ಸರಕಾರಿ ಶಾಲೆಗೆ ಆಗಮಿಸಿ ಮತಗಟ್ಟೆ 82ರಲ್ಲಿ ಮತಚಲಾಯಿಸಿದರು.
ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದ ಶಾಸಕರಾಗಿದ್ದಾರೆ. ಆದರೆ ಈ ಬಾರಿ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಸಿದ್ದರಾಮಯ್ಯ ಅವರು ಪಕ್ಕದ ಚಾಮುಂಡೇಶ್ವರಿ ಮತ್ತು ಬಾದಾಮಿ ಕ್ಷೇತ್ರದಲ್ಲಿ ಅದೃಷ್ಠ ಪರೀಕ್ಷೆಗೆ ಇಳಿದಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ವರುಣಾ ಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿ 10 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯ ಗಳಿಸುವುದಾಗಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.