ಯುವತಿಯ ಜೊತೆ ಅಸಭ್ಯ ವರ್ತನೆ: ಆರೋಪ

Update: 2018-05-13 11:57 GMT

ಬೆಂಗಳೂರು, ಮೇ 13: ಯುವತಿಯೊಬ್ಬಕೆಯ ಜೊತೆ ಅಪರಿಚಿತ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿರುವ ಘಟನೆ ಇಲ್ಲಿನ ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.

ಉದ್ಯಮಿಯೊಬ್ಬರ ಪುತ್ರಿಯಾಗಿರುವ ಯುವತಿ, ಶನಿವಾರ ಸಂಜೆ ನಗರ ಎಸ್‌ಎಫ್‌ಎಸ್ ಯಲಹಂಕ ಉಪನಗರ ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಬಂದು ಆಕೆಯ ಬಟ್ಟೆ ಎಳೆದು ಅಸಭ್ಯವಾಗಿ ವರ್ತಿಸಿದ್ದಾನೆ. ಘಟನೆಯಿಂದ ಯುವತಿ ಗಾಬರಿಗೊಂಡು ಕಿರುಚುತ್ತಿದ್ದಂತೆ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಘಟನೆ ಸಂಬಂಧ ಯಲಹಂಕ ಉಪನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ, ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News