ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ

Update: 2018-05-13 15:14 GMT

ಬೆಂಗಳೂರು, ಮೇ 13: ಉದ್ಯಾನನಗರಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಾಜಧಾನಿಯಲ್ಲಿಂದು ಮಧ್ಯಾಹ್ನ ಸುರಿದ ಅಬ್ಬರದ ಮಳೆ ಸಾರ್ವಜನಿಕರನ್ನು ಸಂಕಷ್ಟಕ್ಕೆ ಸಿಲುಕಿಸಿತು.

ಇಲ್ಲಿನ ಕಬ್ಬನ್‌ಪೇಟೆ, ವಿಧಾನಸೌಧ, ಕಬ್ಬನ್ ಪಾರ್ಕ್, ಕೆ.ಆರ್.ವೃತ್ತ, ಲಾಲ್‌ಬಾಗ್, ಮಡಿವಾಳ, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಕೆಂಗೇರಿ, ವಸಂತಪುರ, ಎಂ.ಜಿ.ರಸ್ತೆ ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದೆ.

ಇಲ್ಲಿನ ಓಕಳೀಪುರನಲ್ಲಿ ಕೆಳಸೇತುವೆಯಲ್ಲಿ ಎರಡು-ಮೂರು ಅಡಿಗಳಷ್ಟು ಮಳೆ ನೀರು ಸಂಗ್ರಹವಾದ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ ಸವಾರರು ಪರದಾಡುವಂತೆ ಆಯಿತು. ರವಿವಾರದ ರಜೆಯ ಸಂಭ್ರಮದಲ್ಲಿದ್ದ ಜನರಿಗೆ ಮಳೆ ಅಡ್ಡಿಯನ್ನುಂಟು ಮಾಡಿತು.

‘ಅರಬ್ಬಿ ಸಮುದ್ರ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇನ್ನು ಮೂರು-ನಾಲ್ಕು ದಿನ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ ಕೆಲ ಭಾಗಗಳಲ್ಲಿ ಭಾರೀ ಮಳೆಯಾಗಲಿದ್ದು, ಕೆಲವೆಡೆ ಚದುರಿದ ಅಥವಾ ಸಾಧಾರಣ ಮಳೆಯಾಗಲಿದೆ’
-ಶ್ರೀನಿವಾಸ ರೆಡ್ಡಿ ನೈಸರ್ಗಿಕ ವಿಕೋಪ ಕೇಂದ್ರದ ನಿರ್ದೇಶಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News