ಬೊಂದೆಲ್‌ನಲ್ಲಿ ಮತ ಏಣಿಕೆ
Update: 2018-05-13 22:01 IST
ಮಂಗಳೂರು, ಮೇ.13: ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಏಣಿಕೆ ಮೇ 15ರಂದು ಮಂಗಳೂರಿನ ಬೊಂದೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಮಹಾತ್ಮ ಗಾಂಧಿ ಶತಾಬ್ಧಿ ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ.
ಬೆಳಗ್ಗೆ 8ಗಂಟೆಯಿಂದ ಮಂಗಳೂರು ಉತ್ತರ, ಮೂಡುಬಿದಿರೆ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಗಳ ಮತ ಏಣಿಕೆ ಕಾರ್ಯ ಮಹಾತ್ಮ ಗಾಂಧಿ ಶತಾಬ್ಧಿ ಹಿ.ಪ್ರಾ. ಶಾಲೆಯಲ್ಲಿ ನಡೆಯಲಿದೆ.
ಪುತ್ತೂರು, ಬಂಟ್ವಾಳ, ಮಂಗಳೂರು, ಮಂಗಳೂರು ದಕ್ಷಿಣ, ಸೇರಿದಂತೆ ಉಳಿದ ಐದು ವಿಧಾನ ಸಭಾ ಕ್ಷೇತ್ರಗಳ ಮತ ಏಣಿಕೆ ಕಾರ್ಯ ಮಂಗಳೂರಿನ ಬೊಂದೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.