ಮಂಡ್ಯ: ಶೇ. 82.37 ರಷ್ಟು ಮತದಾನ
ಮಂಡ್ಯ, ಮೇ 13: ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಿಗೆ ಮೇ 12 ರಂದು ನಡೆದ ಚುನಾವಣೆಯಲ್ಲಿ ಒಟ್ಟಾರೆ ಶೇ.82.37 ರಷ್ಟು ಮತದಾನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುಶ್ರೀ ತಿಳಿಸಿದ್ದಾರೆ.
ಜಿಲ್ಲೆಯ ಒಟ್ಟು 14,88,000 ಮತದಾರರ ಪೈಕಿ 12,25,596 ಮತದಾರರು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ. ಶೇ.82.68ರಷ್ಟು ಪುರುಷರು, ಶೇ.82.06ರಷ್ಟು ಮಹಿಳೆಯರು, ಶೇ.20.77 ಇತರೆ ವರ್ಗದವರು ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಅಂತಿಮವಾಗಿ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಶೇ.72.16ರಷ್ಟು, ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಶೇ.81.13 ರಷ್ಟು, ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ.82.87 ರಷ್ಟು, ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಶೇ.86.88 ರಷ್ಟು, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಶೇ.83.86ರಷ್ಟು, ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ 87.27ರಷ್ಟು ಹಾಗೂ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಶೇ.83.86ರಷ್ಟು ಮತದಾರರು ಮತಚಲಾಯಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.