ಮದ್ದೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ
Update: 2018-05-13 22:22 IST
ಮದ್ದೂರು,ಮೇ 13: ರಾಜಕೀಯ ಹಾಗೂ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿರುವ ಘಟನೆ ತಾಲೂಕಿನ ಅಡಗನಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.
ಜೆಡಿಎಸ್ ಮುಖಂಡ ರವೀಂದ್ರ ಅವರ ಮಗ ನಂದೀಶ್ ಅವರ ಮೇಲೆ ಹಲ್ಲೆ ನಡೆದಿದ್ದು, ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೇ ಗ್ರಾಮದ ಕಾಂಗ್ರೆಸ್ ಪಕ್ಷದವರಾದ ನಿತಿನ್, ಅವಿನಾಶ್ ಹಾಗೂ ಡೇರಿ ಕಾರ್ಯದರ್ಶಿ ರಾಜು ಸೇರಿದಂತೆ ಹಲವರು ಹಲ್ಲೆ ಮಾಡಿದ್ದಾರೆಂದು ದೂರು ನೀಡಲಾಗಿದೆ.
ಈ ಸಂಬಂಧ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.