ಐಸಿಎಸ್‌ಇ ಫಲಿತಾಂಶ ಪ್ರಕಟ: ನ್ಯೂ ಶಮ್ಸ್ ಸ್ಕೂಲ್ ಶೇ.100
Update: 2018-05-14 16:54 IST
ಭಟ್ಕಳ, ಮೇ 14: ತಾಲೂಕಿನ ಹೆಬಳೆ ಗ್ರಾ.ಪಂ ವ್ಯಾಪ್ತಿಯ ಜಾಮಿಯಾಬಾದ್ ರಸ್ತೆಯಲ್ಲಿರುವ ಪ್ರತಿಷ್ಟಿತ ತರಬಿಯತ್ ಎಜ್ಯುಕೇಶನ್ ಸೂಸೈಟಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನ್ಯೂ ಶಮ್ಸ್ ಸ್ಕೂಲ್ ಭಟ್ಕಳ ಇದರ ಐಸಿಎಸ್‌ಇ ಇದರ ಫಲಿತಾಂಶ ಪ್ರಕಟಗೊಂಡಿದ್ದು ಶೇ.100 ಫಲಿತಾಂಶ ದಾಖಲಿಸಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.
7 ಮಂದಿ ವಿದ್ಯಾರ್ಥಿನಿಯರು, 12 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಮರಿಯಂ ಇಸ್ಹಾಖಿ ಶೇ. 85 ಅಂಕ ಪಡೆಯುವುದರ ಮೂಲಕ ಶಾಲೆಗೆ ಪ್ರಥಮ ಸ್ಥಾನಗಳಿಸಿದ್ದಾರೆ. 16 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಶಾಲೆಗೆ ಶೇ.100 ಫಲಿತಾಂಶ ಬಂದಿದ್ದಕ್ಕಾಗಿ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಕಾದಿರ್ ಬಾಷಾ ರುಕ್ನುದ್ದೀನ್ ಕಾರ್ಯದರ್ಶಿ ತಲ್ಹಾ ಸಿದ್ದಿಬಾಪ, ಪ್ರಾಂಶುಪಾಲೆ ಫಹಮಿದಾ ಮುಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ ವೃಂದಕ್ಕೆ ಅಭಿನಂದಸಿದ್ದಾರೆ.