ಹರಿಹರ: ರಸ್ತೆ ಅಪಘಾತ; ಬೈಕ್ ಸವಾರ ಮೃತ್ಯು
Update: 2018-05-14 18:44 IST
ಹರಿಹರ,ಮೇ.14: ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಚಾಲಕ ಮೃತಪಟ್ಟು, ಹಿಂಬದಿ ಸವಾರ ತೀವ್ರವಾಗಿ ಗಾಯಗೊಂಡ ಘಟನೆ ಇಲ್ಲಿಗೆ ಸಮೀಪದ ಕುಮಾರಪಟ್ಟಣದ ರಾಷ್ಟ್ರೀಯ ಹೆದ್ದಾರಿ ನಂ 4 ರಲ್ಲಿ ಸಂಭವಿಸಿದೆ.
ಘಟನೆಯಲ್ಲಿ ಮೃತಪಟ್ಟಿರುವ ವ್ಯಕ್ತಿಯು ಹರಿಹರ ತಾಲೂಕಿನ ಬಾನುವಳ್ಳಿ ಗ್ರಾಮದ ಪ್ರಭುಗೌಡ (20) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಹಿಂಬದಿ ಸವಾರ ವಿಜಯಕುಮಾರ (22) ರನ್ನು ದಾವಣಗೆರೆಯ ಎಸ್ ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಮಾರಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.