ಐಸಿಎಸ್‌ಇ: ವಿದ್ಯೋದಯ ಶೇ.100 ಫಲಿತಾಂಶ
Update: 2018-05-14 20:58 IST
ಉಡುಪಿ, ಮೇ 14: ಉಡುಪಿ ವಿದ್ಯೋದಯ ಪಬ್ಲಿಕ್ ಸ್ಕೂಲ್ ಐಸಿಎಸ್‌ಇ ಪಠ್ಯಕ್ರಮದ 2017-18ನೇ ಸಾಲಿನ 10ನೆ ತರಗತಿಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ.
ಈ ಬಾರಿ 88 ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದು 33 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 54 ವಿದ್ಯಾರ್ಥಿಗಳು ಪ್ರಥಮ ಮತ್ತು ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಸಂಜನಾ ಶರ್ಮಾ ಗರಿಷ್ಠ ಶೇ.98.8 ಅಂಕ ಗಳಿಸಿ ಶಾಲೆಗೆ ಪ್ರಥಮರಾಗಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಸುಧಾ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.