ರಾಜ್ಯಾದ್ಯಂತ 38 ಕೇಂದ್ರಗಳಲ್ಲಿ 222 ಕ್ಷೇತ್ರಗಳ ಮತ ಎಣಿಕೆ

Update: 2018-05-14 15:54 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 14: ರಾಜ್ಯದ 222 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು 38 ಕೇಂದ್ರಗಳಲ್ಲಿ ನಡೆಯಲಿದೆ. ಬಾಗಲಕೋಟೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯ, ಬಳ್ಳಾರಿಯ 9 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ರಾವ್ ಬಹದ್ದೂರ್ ವೈ.ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದೆ.

ಬಿಬಿಎಂಪಿ ಕೇಂದ್ರ ವಿಭಾಗದ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಬಸವನಗುಡಿಯ ಗಾಂಧಿ ಬಜಾರ್‌ನಲ್ಲಿರುವ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ, ಬಿಬಿಎಂಪಿ ಉತ್ತರ ವಿಭಾಗದ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಮಹಿಳಾ ಪಿಯು ಕಾಲೇಜಿನಲ್ಲಿ ನಡೆಯಲಿದೆ.

ಬಿಬಿಎಂಪಿ ದಕ್ಷಿಣ ವಿಭಾಗದ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಜಯನಗರದ ನಾಲ್ಕನೆ ‘ಟಿ’ ಬ್ಲಾಕ್‌ನಲ್ಲಿರುವ ಎಸ್‌ಎಸ್‌ಎಂಆರ್‌ವಿ ಪಿಯು ಕಾಲೇಜು, ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ತಿಲಕವಾಡಿಯ ರಾಣಿ ಪಾವರ್ತಿ ದೇವಿ ಕಾಲೇಜಿನಲ್ಲಿ ನಡೆಯಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಬಸವೇಶ್ವರ ವೃತ್ತದಲ್ಲಿರುವ ಸರಕಾರಿ ರಾಮನಾರಾಯಣ್ ಚೆಲಾರಾಮ್ ವಾಣಿಜ್ಯ ಮತ್ತು ನಿರ್ವಹಣೆ ಕಾಲೇಜು, ಬೆಂಗಳೂರು ನಗರ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಮಹಾರಾಣಿ ಕಲೆ ಮತ್ತು ವಾಣಿಜ್ಯ ಕಾಲೇಜಿನಲ್ಲಿ ನಡೆಯಲಿದೆ.

ಬೀದರ್ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಬಿವಿಬಿ ಕಾಲೇಜು, ಚಾಮರಾಜನಗರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಬೇಡರಪುರದಲ್ಲಿರುವ ಸರಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಗುಡಿಬಂಡೆ ತಾಲೂಕಿನ ಶಾ-ಸಾಹಿಬ್ ಎಂಜಿನಿಯರಿಂಗ್ ಕಾಲೇಜು, ಚಿಕ್ಕಮಗಳೂರು ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಶ್ರೀ ತರಳಬಾಳು ಜಗದ್ಗುರು ಮಹಿಳಾ ಪದವಿ ಕಾಲೇಜಿನಲ್ಲಿ ನಡೆಯಲಿದೆ.

ಚಿತ್ರದುರ್ಗ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಸರಕಾರಿ ಕಲಾ ಕಾಲೇಜು ಹಾಗೂ ಪಿಜಿ ಬ್ಲಾಕ್‌ನಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಮಹಾತ್ಮಗಾಂಧಿ ಶತಮಾನೋತ್ಸವ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸಂಯುಕ್ತ ಪಿಯು ಕಾಲೇಜಿನಲ್ಲಿ ನಡೆಯಲಿದೆ.

ದಾವಣಗೆರೆ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ, ಧಾರವಾಡ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಕೃಷಿ ವಿಶ್ವವಿದ್ಯಾಲಯ, ಗದಗ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಶ್ರೀ ಜಗದ್ಗುರು ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದೆ.

ಗುಲ್ಬರ್ಗ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ, ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಸರಕಾರಿ ಎಂಜಿನಿಯರಿಂಗ್ ಕಾಲೇಜು, ಹಾವೇರಿ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ದೇವಗಿರಿಯಲ್ಲಿರುವ ಸರಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದೆ.

ಕೊಡಗು ಜಿಲ್ಲೆಯ 2 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಸಂತ ಜೋಸೆಫ್ ಕಾನ್ವೆಂಟ್, ಕೋಲಾರ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಸರಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜು, ಕೊಪ್ಪಳ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಶ್ರೀ ಗವಿಸಿದ್ಧೇಶ್ವರ ಕಲೆ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಕಾಲೇಜಿನಲ್ಲಿ ನಡೆಯಲಿದೆ.

ಮಂಡ್ಯ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಸರಕಾರಿ ಕಾಲೇಜು(ಸ್ವಾಯತ್ತ), ಮೈಸೂರು ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಪಡುವಾರಹಳ್ಳಿಯಲ್ಲಿರುವ ಸರಕಾರಿ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣೆ ಕಾಲೇಜಿನಲ್ಲಿ ಹಾಗೂ 4 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಹೂಟಗಲ್ಲಿ ಕೈಗಾರಿಕಾ ಪ್ರದೇಶದಲ್ಲಿರುವ ಎನ್‌ಐಇ ತಾಂತ್ರಿಕ ಸಂಸ್ಥೆಯಲ್ಲಿ ನಡೆಯಲಿದೆ.

ರಾಯಚೂರು ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ವಿದ್ಯಾನಗರದಲ್ಲಿರುವ ಇನ್ಫೆಂಟ್ ಜೀಸಸ್ ಶಾಲೆ, ರಾಮನಗರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಸರಕಾರಿ ಎಂಜಿನಿಯರಿಂಗ್ ಕಾಲೇಜು, ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ನಡೆಯಲಿದೆ.

ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ತುಮಕೂರು ವಿಶ್ವವಿದ್ಯಾಲಯದ ವಿಜ್ಞಾನ ಕಾಲೇಜು, ಕಲಾ ಕಾಲೇಜು ಹಾಗೂ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದೆ. ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಟಿ.ಎ.ಪೈ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಉತ್ತರ ಕನ್ನಡ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕುಮಟಾದಲ್ಲಿರುವ ಡಾ.ಎ.ವಿ. ಬಾಳಿಗಾ ಕಲೆ ಮತ್ತು ವಿಜ್ಞಾನ ಕಾಲೇಜಿನಲ್ಲಿ ನಡೆಯಲಿದೆ.

ವಿಜಯಪುರ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಸೈನಿಕ ಶಾಲೆ ಆವರಣ, ಯಾದಗಿರಿ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಗಾಂಧಿ ಚೌಕ್ ರಸ್ತೆಯಲ್ಲಿರುವ ಸರಕಾರಿ ಜೂನಿಯರ್ ಕಾಲೇಜಿನ ಕಟ್ಟಡದಲ್ಲಿ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News