ಬೆಂಗಳೂರು: ಹಳೇ ದ್ವೇಷ ಹಿನ್ನಲೆ; ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
Update: 2018-05-14 22:00 IST
ಬೆಂಗಳೂರು, ಮೇ 14: ಹಳೇ ದ್ವೇಷದ ಹಿನ್ನಲೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಇಲ್ಲಿನ ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಬಳಿ ನಡೆದಿದೆ.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ವಿಜಯ್ ಎಂಬಾತನ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ.
ನಗರದ ಮಹದೇವಪುರ ಕ್ಷೇತ್ರದ ಅಶ್ವಥನಗರದಲ್ಲಿ ವಿಜಯ್ ಮೇಲೆ ಏಕಾಏಕಿ ಯುವಕರ ಗುಂಪು ಹಲ್ಲೆ ನಡೆಸಿ ಪರಾರಿಯಾಗಿದ್ದು, ಇವರೆಲ್ಲಾ ಬಿಜೆಪಿ ಪಕ್ಷದ ಕಾರ್ಯಕರ್ತರು ಎಂದು ಹೇಳಲಾಗುತ್ತಿದೆ. ಹಲ್ಲೆಗೆ ಹಳೇ ದ್ವೇಷವೇ ಕಾರಣ ಎನ್ನಲಾಗಿದ್ದು, ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಮಾರತ್ತಹಳ್ಳಿ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.