×
Ad

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Update: 2018-05-14 23:30 IST

ಉಡುಪಿ, ಮೇ 14: 2018-19ನೇ ಸಾಲಿನ ದ್ವಿತೀಯ ಪಿಯುಸಿ, ಮೂರು ವರ್ಷಗಳ ಪಾಲಿಟೆಕ್ನಿಕ್, ಡಿಪ್ಲೋಮಾ, ಪದವಿ, ಬಿಎಡ್, ಬಿಪಿಎಡ್, ಸ್ನಾತಕೋತ್ತರ ಪದವಿ, ಎಂಎಡ್, ಎಂಪಿಎಡ್, ಕೃಷಿ, ಪಶುಸಂಗೋಪನೆ, ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಬಹುಮಾನ ಹಣವನ್ನು ಮಂಜೂರು ಮಾಡುವ ಸಲುವಾಗಿ ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್ ಸೈಟ್-www.sw.kar.nic.in-ನಲ್ಲಿ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

 ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನವಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಅರ್ಜಿಯನ್ನು ಹಾಗೂ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ, ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ ಮಣಿಪಾಲ ಇಲ್ಲಿಗೆ ನೀಡಬೇಕು.

ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗೆ ದೂರವಾಣಿ ಸಂಖ್ಯೆ: 0820-2574892ನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News