ಇವಿಎಂ ಬಗ್ಗೆ ಸಂಶಯ : ರೈ ನೇತೃತ್ವದಲ್ಲಿ ಕಾಂಗ್ರೆಸ್ ನ 7 ಅಭ್ಯರ್ಥಿಗಳಿಂದ ಆಕ್ಷೇಪ ದಾಖಲು

Update: 2018-05-15 07:40 GMT

ಮಂಗಳೂರು, ಮೇ 15: ದ.ಕ.ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರದ ಪೈಕಿ ಕಾಂಗ್ರೆಸ್ ಕೇವಲ 1ರಲ್ಲಿ ಮಾತ್ರ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ನೇತೃತ್ವದಲ್ಲಿ ಪಕ್ಷದ ಇತರ 7 ಅಭ್ಯರ್ಥಿಗಳು ಇವಿಎಂ ಬಗ್ಗೆ ಸಂಶಯ ವ್ಯಕ್ತಪಡಿಸಿ ರಿಟರ್ನಿಂಗ್ ಆಫೀಸರ್ ಮುಂದೆ ಆಕ್ಷೇಪ ದಾಖಲಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ ಬೋಂದೆಲ್‌ನಲ್ಲಿರುವ ಮತ ಎಣಿಕೆಯ ಕೇಂದ್ರಕ್ಕೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿಗಳು ‘ಇವಿಎಂ ಬಗ್ಗೆ ಸಂಶಯವಿದೆ’ ಎಂದು ಆಕ್ಷೇಪ ದಾಖಲಿಸಿದರು. ಅಲ್ಲದೆ ಬುಧವಾರ ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಲು ನಿರ್ಧರಿಸಿದ್ದಾರೆ.

ಕಾಂಗ್ರೆಸ್‌ಗೆ 8ರಲ್ಲಿ 8 ಸ್ಥಾನವನ್ನೂ ಗೆಲ್ಲುವ ವಿಶ್ವಾಸವಿತ್ತು. ಆದರೆ, ಫಲಿತಾಂಶ ಎಲ್ಲಾ ಲೆಕ್ಕಾಚಾರವನ್ನು ತಲೆಕೆಳಗೆ ಮಾಡಿತ್ತು. ಹಾಗಾಗಿ ಇವಿಎಂ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳು ಆಕ್ಷೇಪದ ದೂರುಗಳನ್ನು ದಾಖಲಿಸಿದ್ದಾರೆ. ಅಲ್ಲದೆ, ಚುನಾವಣಾಧಿಕಾರಿಗಳ ತೀರ್ಮಾನದ ಬಳಿಕ ಮುಂದಿನ ತಮ್ಮ ನಡೆಯ ಕುರಿತು ನಿರ್ಧರಿಸಲಿದ್ದಾರೆ.

ರಮಾನಾಥ ರೈ ಅವರೊಂದಿಗೆ ಅಭ್ಯರ್ಥಿಗಳಾದ ಜೆ.ಆರ್. ಲೋಬೊ, ಮೊಯ್ದಿನ್ ಬಾವ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News