ಜೆಡಿಎಸ್ ಜೊತೆ ಮೈತ್ರಿ ಪ್ರಯತ್ನಕ್ಕೆ ಮುಂದಾದ ಬಿಜೆಪಿ
Update: 2018-05-15 15:17 IST
ಬೆಂಗಳೂರು, ಮೇ 15: ಕಾಂಗ್ರೆಸ್ ನಡೆಯಿಂದ ಎಚ್ಚೆತ್ತ ಬಿಜೆಪಿ ನಾಯಕರು ಜೆಡಿಎಸ್ ನಾಯಕರ ಜೊತೆ ಮೈತ್ರಿ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ.
ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಸಾಧ್ಯತೆಯನ್ನು ಬೇಗನೆ ಅರಿತ ಕಾಂಗ್ರೆಸ್ ಪಕ್ಷ ಜೆಡಿಎಸ್ ವರಿಷ್ಠ ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ. ಕುಮಾರ ಸ್ವಾಮಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಆಫರ್ ನೀಡಿದೆ. ಪೂರ್ಣ ಫಲಿತಾಂಶ ಹೊರ ಬಂದ ಬಳಿಕ ತನ್ನ ನಿರ್ಧಾರ ತಿಳಿಸುವುದಾಗಿ ಜೆಡಿಎಸ್ ಹೇಳಿದೆ ಎನ್ನಲಾಗಿದೆ.
ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಸ್ಪಷ್ಟ ಬಹುಮತ ಪಡೆಯಲು ವಿಫಲವಾಗಿರುವ ಬಿಜೆಪಿ ಪಕ್ಷದ ನಾಯಕರು ಕಾಂಗ್ರೆಸ್ ನಡೆಯಿಂದ ಕೊನೆಗೂ ಎಚ್ಚೆತ್ತುಕೊಂಡು ಜೆಡಿಎಸ್ ನಾಯಕರನ್ನು ಸಂಪರ್ಕಿಸಲು ಪ್ರಯತ್ನಿಸುತಿದ್ದಾರೆ. ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬಾರದ ಹಿನ್ನೆಲೆಯಲ್ಲಿ ಜೆಡಿಎಸ್ ಕಿಂಗ್ ಮೇಕರ್ ಆಗಿದೆ.