ಸಿಎಂ ಸಿದ್ದರಾಮಯ್ಯ ರಾಜೀನಾಮೆ
Update: 2018-05-15 16:33 IST
ಬೆಂಗಳೂರು, ಮೇ 15: ರಾಜ್ಯದಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯುವಲ್ಲಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದಾರೆ.
ಚುನಾವಣಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸಿದ್ದರಾಮಯ್ಯ ಅವರು ರಾಜ್ಯಪಾಲ ವಜೂ ಭಾಯಿ ವಾಲಾರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದರು.
ರಾಜ್ಯಪಾಲ ವಜೂ ಭಾಯಿ ವಾಲಾ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆಂದು ತಿಳಿದು ಬಂದಿದೆ.