ಸರಕಾರ ರಚನೆಗೆ ಬಿಜೆಪಿ ಹಕ್ಕು ಮಂಡನೆ
Update: 2018-05-15 17:44 IST
ಬೆಂಗಳೂರು, ಮೇ 15: ರಾಜ್ಯ ವಿಧಾನ ಸಭಾ ಚುನಾವಣೆಗೆ ನಡೆದ ಚುನಾವಣೆಯಲ್ಲಿ ಗರಿಷ್ಠ ಸ್ಥಾನಗಳನ್ನು ಜಯಿಸಿರುವ ಬಿಜೆಪಿ ರಾಜ್ಯಪಾಲರನ್ನು ಭೇಟಿಯಾಗಿ ಸರಕಾರ ರಚನೆಗೆ ಅವಕಾಶ ನೀಡುವಂತೆ ಮನವಿ ಮಾಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇತೃತ್ವದ ನಿಯೋಗ ರಾಜ್ಯಪಾಲ ವಜೂ ಭಾಯಿ ವಾಲಾ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.