ಹಿಂದುತ್ವದ ಎದುರು ಸತ್ಯಕ್ಕೆ, ನ್ಯಾಯಕ್ಕೆ ಬೆಲೆ ಸಿಕ್ಕಿಲ್ಲ: ಅಭಯಚಂದ್ರ ಜೈನ್
Update: 2018-05-15 20:29 IST
ಮಂಗಳೂರು, ಮೇ 15: ದ.ಕ. ಮತ್ತು ಉಡುಪಿ ಜಿಲ್ಲೆಗಳ ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಮೋದಿ ಮತ್ತು ಹಿಂದುತ್ವದ ಪ್ರಚಾರವು ಕೆಲಸ ಮಾಡಿದೆ ಎಂದು ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಅಭಯಚಂದ್ರ ಜೈನ್ ಹೇಳಿದ್ದಾರೆ.
ಮೋದಿ, ಹಿಂದುತ್ವ ಯುವಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಸತ್ಯ, ಧರ್ಮ, ನ್ಯಾಯಕ್ಕೆ ಬೆಲೆ ಸಿಕ್ಕಿಲ್ಲ. ಮುಂದಿನ ಚುನಾವಣೆಯಲ್ಲಿ ಯುವಕರ ಸ್ಪರ್ಧೆಗೆ ಅವಕಾಶ ಕಲ್ಪಿಸಬೇಕು ಎಂದು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಇವಿಎಂ ಅನ್ನು ನಾನು ದೂರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.