×
Ad

ಉಡುಪಿ: 1985-89ರಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದ ಕಾಂಗ್ರೆಸ್ 2018ರಲ್ಲಿ ಶೂನ್ಯ !

Update: 2018-05-15 22:57 IST

ಉಡುಪಿ, ಮೇ 15: 1985 ಮತ್ತು 1989ರ ವಿಧಾನಸಭಾ ಚುನಾವಣೆ ಯಲ್ಲಿ ಉಡುಪಿ ಜಿಲ್ಲೆಯ ಆರು ಕ್ಷೇತ್ರಗಳಲ್ಲಿಯೂ (ಆಗ ಬ್ರಹ್ಮಾವರ ಕ್ಷೇತ್ರವಾಗಿತ್ತು) ಜಯಭೇರಿ ಸಾಧಿಸಿದ್ದ ಕಾಂಗ್ರೆಸ್ ಪಕ್ಷವು ಜಿಲ್ಲೆಯ ಇತಿಹಾಸದಲ್ಲೇ ಪ್ರಥಮ ಬಾರಿಗೆ ಎಂಬಂತೆ ಈ ಬಾರಿಯ ಚುನಾವಣೆಯಲ್ಲಿ ಐದು ಕ್ಷೇತ್ರಗಳಲ್ಲಿಯೂ ಸೋಲು ಕಂಡು ಶೂನ್ಯ ಸಂಪಾದಿಸಿದೆ.

1985ರ ವಿಧಾನಸಭಾ ಚುನಾವಣೆಯಲ್ಲಿ ಆಗಿನ ದ.ಕ. ಜಿಲ್ಲಾ ವ್ಯಾಪ್ತಿ ಯಲ್ಲಿದ್ದ ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಜಿ.ಎಸ್.ಆಚಾರ್, ಕುಂದಾಪುರ ದಲ್ಲಿ ಪ್ರತಾಪ್‌ಚಂದ್ರ ಶೆಟ್ಟಿ, ಬ್ರಹ್ಮಾವರದಲ್ಲಿ ಪಿ.ಬಸವರಾಜ್, ಉಡುಪಿಯಲ್ಲಿ ಮನೋರಮಾ ಮಧ್ವರಾಜ್, ಕಾಪುವಿನಲ್ಲಿ ವಸಂತ ವಿ.ಸಾಲ್ಯಾನ್ ಹಾಗೂ ಕಾರ್ಕಳ ಕ್ಷೇತ್ರದಲ್ಲಿ ವೀರಪ್ಪ ಮೊಲಿ ಗೆಲ್ಲುವ ಮೂಲಕ ಕಾಂಗ್ರೆಸ್ ಆರಕ್ಕೆ ಆರು ಸ್ಥಾನಗಳನ್ನು ಕೂಡ ತನ್ನದಾಗಿಸಿಕೊಂಡಿತ್ತು.

1989ರ ಚುನಾವಣೆಯಲ್ಲೂ ಇವರೇ ಗೆದ್ದು ಬಂದು ಕಾಂಗ್ರೆಸ್ ಮತ್ತೆ ಆರಕ್ಕೆ ಆರು ಸ್ಥಾನದಲ್ಲಿ ತನ್ನ ಜಯಭೇರಿಯನ್ನು ಮುಂದುವರೆಸಿ ಭದ್ರಕೋಟೆಯನ್ನಾ ಗಿಸಿತ್ತು. 1994 ಮತ್ತು 1999ರಲ್ಲಿ ಕಾಂಗ್ರೆಸ್ ಕೆಲವೊಂದು ಸ್ಥಾನಗಳನ್ನು ಉಳಿಸಿ ಕೊಂಡಿತ್ತು. 2004 ಮತ್ತು 2008ರ ವಿಧಾನಸಭಾ ಚುನಾವಣೆಯಲ್ಲಿ ಮಾತ್ರ ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ಕಂಡಿತ್ತು. ಆಗ 2004ರಲ್ಲಿ ಬೈಂದೂರು ಕ್ಷೇತ್ರದಲ್ಲಿ ಗೋಪಾಲ ಪೂಜಾರಿ ಹಾಗೂ 2008ರಲ್ಲಿ ಕಾರ್ಕಳ ಕ್ಷೇತ್ರದಲ್ಲಿ ಗೋಪಾಲ ಭಂಡಾರಿ ಶಾಸಕರಾಗಿ ಆಯ್ಕೆ ಯಾಗಿ ಬಂದು ಕಾಂಗ್ರೆಸ್ ಪಕ್ಷದ ಮಾನ ಉಳಿಸಿದ್ದರು.

ಆದರೆ 2018ರ ಚುನಾವಣೆಯಲ್ಲಿ ಮಾತ್ರ ಕಾಂಗ್ರೆಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಎಂಬಂತೆ ಜಿಲ್ಲೆಯ ಎಲ್ಲ ಐದು ಕ್ಷೇತ್ರಗಳನ್ನೂ ಕೂಡ ಕಳೆದುಕೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News