×
Ad

ರಾಜಕೀಯ ಪಕ್ಷಗಳ ನಡುವೆ ಘರ್ಷಣೆ: ಲಾಠಿ ಪ್ರಹಾರ

Update: 2018-05-15 23:21 IST

ಬಾಗಲಕೋಟೆ/ವಿಜಯಪುರ, ಮೇ 15: ವಿಧಾನಸಭಾ ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ಬಾದಾಮಿ ಹಾಗೂ ವಿಜಯಪುರದ ಸೈನಿಕ ಶಾಲೆಯ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಹಾಗೂ ಘರ್ಷಣೆ ನಡೆದಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಲಾಠಿ ಚಾರ್ಜ್ ಮಾಡಿ ಗುಂಪನ್ನು ಚದುರಿಸಿದ್ದಾರೆ.

ರಾಜ್ಯದ ಹೈವೋಲ್ಟೇಜ್ ಕ್ಷೇತ್ರವಾದ ಬಾದಾಮಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಣೆ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು, ಸ್ವಲ್ಪ ಸಮಯದ ನಂತರ ಗಲಾಟೆ ವಿಕೋಪಕ್ಕೆ ತಿರುಗಿದೆ. ಈ ಸಂದರ್ಭದಲ್ಲಿ ಪೊಲೀಸರು ಮಧ್ಯಪ್ರವೇಶಿಸಿ ಸಮಾದಾನಪಡಿಸುವಲ್ಲಿ ಯಶಸ್ವಿಯಾದರು.

ವಿಜಯಪುರದ ಸೈನಿಕ ಶಾಲೆಯ ಮತ ಎಣಿಕೆ ಕೇಂದ್ರದ ಬಳಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಕೇಂದ್ರದೊಳಗೆ ನುಗ್ಗಲು ಪ್ರಯತ್ನಿಸಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದ್ದಾರೆ. ಇದೇ ವೇಳೆ ಮೂರು ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News