ಉಡುಪಿ ಜಿಲ್ಲೆಯಲ್ಲಿ ಇತಿಹಾಸ ನಿರ್ಮಾಣ: ಮಟ್ಟಾರ್
Update: 2018-05-16 00:03 IST
ಉಡುಪಿ, ಮೇ 15: ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ 5 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಹೊಸ ಇತಿಹಾಸವನ್ನು ಬರೆಯಲಾಗಿದೆ. ಇದಕ್ಕಾಗಿ ಕಳೆದ ಎರಡು ವರ್ಷಗಳಿಂದ ನಮ್ಮ ಕಾರ್ಯಕರ್ತರು ಛಲದಿಂದ ಅಹೋ ರಾತ್ರಿ ದುಡಿದಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳಿಗೆ ಮತದಾರರು ಆರ್ಶೀವಾದ ಮಾಡಿ ಗೆಲ್ಲಿಸಿದ್ದಾರೆ ಎಂದವರು ಪತ್ರಿಕಾ ಹೇಳಿಕೆ ಯಲ್ಲಿ ತಿಳಿಸಿದ್ದಾರೆ. ಗ್ರಾಪಂ, ತಾಪಂ, ಜಿಪಂ ಬಳಿಕ ಇದೀಗ ವಿಧಾನಸಭಾ ಚುನಾವಣೆಯನ್ನು ಪೂರ್ತಿಯಾಗಿ ಗೆಲ್ಲುವ ಮೂಲಕ ಉಡುಪಿ ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತ ಜಿಲ್ಲೆಯನ್ನಾಗಿ ಮಾಡಲಾಗಿದೆ ಎಂದವರು ತಿಳಿಸಿದ್ದಾರೆ