×
Ad

ಜೆಡಿಎಸ್ ಶಾಸಕಾಂಗ ಸಭೆ ಆರಂಭ

Update: 2018-05-16 10:47 IST

ಬೆಂಗಳೂರು, ಮೇ 16: ಇಂದು ಬೆಳಗ್ಗೆ ಕುಮಾರ ಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪಕ್ಷದ ಶಾಸಕಾಂಗ ಸಭೆ ಆರಂಭವಾಗಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಜೊತೆಗೆ ಚರ್ಚಿಸಿದ ಬಳಿಕ ಶಾಸಕಾಂಗ ನಾಯಕನ ಆಯ್ಕೆ ನಡೆಯಲಿದೆ. ಆ ನಂತರ ರಾಜ್ಯಪಾಲರನ್ನು ಭೇಟಿಯಾಗುವ ಸಾಧ್ಯತೆಯಿದೆ.

ಮತ್ತೊಂದೆಡೆ, ಬಿಜೆಪಿಯು ಇಂದು ಶಾಸಕಾಂಗ ಸಭೆ ನಡೆಸಿ ತನ್ನ ನಾಯಕನನ್ನು ಆಯ್ಕೆ ಮಾಡಿದ ಬಳಿಕ ಮತ್ತೊಮ್ಮೆ ರಾಜ್ಯಪಾಲರನ್ನು ಭೇಟಿಯಾಗಿ ಸರಕಾರ ರಚಿಸಲು ತನಗೆ ಮೊದಲಿಗೆ ಆಹ್ವಾನ ನೀಡಬೇಕೆಂದು ಆಗ್ರಹಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News