ಬಿಜೆಪಿ ನಾಯಕರು ನನ್ನನ್ನು ಸಂಪರ್ಕಿಸಿದ್ದಾರೆ: ಕಾಂಗ್ರೆಸ್ ಶಾಸಕ ರಾಜೇಗೌಡ
Update: 2018-05-16 13:46 IST
ಚಿಕ್ಕಮಗಳೂರು, ಮೇ 16: ಬಿಜೆಪಿ ಪಕ್ಷ ನನಗೆ ಕರೆ ಮಾಡುತ್ತಿದ್ದು ಆ ಬಗ್ಗೆ ನಾನು ಚಿಂತಿಸುತ್ತಿಲ್ಲ. ನನಗೆ ಕರೆ ಮಾಡಬೇಡಿ ಎಂದು ಅವರಿಗೆ ಸ್ಪಷ್ಟವಾಗಿ ಹೇಳಿದ್ದೇನೆ. ನಾನು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠನಾಗಿದ್ದೇನೆ. ಬಿಜೆಪಿ ದೀರ್ಘ ಸಮಯದಿಂದ ಇಂತಹ ಪ್ರಯತ್ನದಲ್ಲಿ ತೊಡಗಿದೆ’’ಎಂದು ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಹೇಳಿದ್ದಾರೆ.
ಬಹುಮತದ ಕೊರತೆ ಎದುರಿಸುತ್ತಿರುವ ಬಿಜೆಪಿ ಬೇರೆ ಪಕ್ಷಗಳ ಶಾಸಕರನ್ನು ತನ್ನತ್ತ ಸೆಳೆಯುತ್ತಿದೆ ಎಂಬ ಸುದ್ದಿ ಕೇಳಿಬರುತ್ತಿರುವ ನಡುವೆ ರಾಜೇಗೌಡರ ಈ ಹೇಳಿಕೆ ಮಹತ್ವ ಪಡೆದಿದೆ. ನಿಮ್ಮನ್ನು ಬಿಜೆಪಿಯವರು ಸಂಪರ್ಕಿಸಿದ್ದಾರೆಯೇ ಎಂಬ ಸುದ್ದಿ ಸಂಸ್ಥೆಯ ಪ್ರಶ್ನೆಗೆ ರಾಜೇಗೌಡ ಉತ್ತರಿಸಿದ್ದಾರೆ.