×
Ad

ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಗೋಳಿಟ್ಟ ಬಿಜೆಪಿ ಅಭ್ಯರ್ಥಿ: ವೀಡಿಯೊ ವೈರಲ್

Update: 2018-05-16 14:13 IST
ವಿಜು ಗೌಡ ಪಾಟೀಲ್

ವಿಜಯಪುರ, ಮೇ 16: ಚುನಾವಣೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಬಲೇಶ್ವೇಶ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜು ಗೌಡ ಪಾಟೀಲ್ ಮಾಧ್ಯಮದವರೆದುರು ಕಣ್ಣೀರಿಡುತ್ತಾ ಆತ್ಮಹತ್ಯೆಯ ಬೆದರಿಕೆ ಹಾಕುತ್ತಿರುವ ವೀಡಿಯೋವೊಂದು ವೈರಲ್ ಆಗಿದೆ.

ಬಬಲೇಶ್ವರ ಕ್ಷೇತ್ರದಲ್ಲಿ 12 ಮತಯಂತ್ರಗಳನ್ನು ಬದಲಾಯಿಸಲಾಗಿತ್ತು. ಆದರೆ ಈ ಬಗ್ಗೆ ತನಗೆ ಯಾವುದೇ ಸೂಚನೆಯನ್ನು ನೀಡಿರಲಿಲ್ಲ. ಮತ ಎಣಿಕೆ ಕೇಂದ್ರದಲ್ಲಷ್ಟೇ ಈ ಬಗ್ಗೆ ನನಗೆ ಸೂಚನಾಪತ್ರ ನೀಡಿದ್ದಾರೆ. ಈ ಮೂಲಕ ಇಲ್ಲಿನ ಅಧಿಕಾರಿಗಳು ಮೊದಲೇ ‘ಬುಕ್’ ಆಗಿದ್ದಾರೆ.ಇದ್ಯಾವ ನ್ಯಾಯ ಎಂದು ಪ್ರಶ್ನಿಸುವ ಅವರು, ಜಿಲ್ಲಾಧಿಕಾರಿ, ಚುನಾವಣಾಧಿಕಾರಿಯವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿರುವುದು ವೀಡಿಯೋದಲ್ಲಿದೆ.

ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ.ಪಾಟೀಲ್ ಅವರು ಜಯಭೇರಿ ಬಾರಿಸಿದ್ದಾರೆ. ಇಲ್ಲಿ ಎಂ.ಬಿ.ಪಾಟೀಲ್ 98,339 ಮತಗಳನ್ನು ಗಳಿಸಿದ್ದರೆ, ವಿಜು ಪಾಟೀಲ್ 68,624 ಮತಗಳನ್ನು ಪಡೆದು 29,715 ಮತಗಳ ಅಂತರದಿಂದ ಸೋಲುಂಡಿದ್ದಾರೆ. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News