×
Ad

ಬಿಜೆಪಿಗೆ ಸರಕಾರ ರಚನೆಗೆ ಅವಕಾಶ ನೀಡಿದರೆ ಪ್ರತಿಭಟನೆ: ಕಾಂಗ್ರೆಸ್, ಜೆಡಿಎಸ್ ನಿರ್ಧಾರ

Update: 2018-05-16 15:29 IST

 ಬೆಂಗಳೂರು, ಮೇ 16: ಬಿಜೆಪಿಗೆ ಸರಕಾರ ರಚನೆಗೆ ರಾಜ್ಯಪಾಲ ವಜೂಭಾಯಿ ವಾಲಾ ಅವಕಾಶ ನೀಡಿದರೆ ರಾಜಭವನ ಅಥವಾ ವಿಧಾನಸೌಧದ ಆವರಣದಲ್ಲಿ ತೀವ್ರ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಒತ್ತಡ ಹೇರಲು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ನಿರ್ಧರಿಸಿವೆ ಎನ್ನಲಾಗಿದೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ನಾಯಕರು ಅಹೋರಾತ್ರಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ವಿವಿಧ ಪಕ್ಷಗಳ ಕೇಂದ್ರ ನಾಯಕರು ಸಾಥ್ ನೀಡಲಿದ್ದಾರೆ ಎಂದು ಹೇಳಲಾಗಿದೆ.

ಇದೇ ವೇಳೆ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಬಿಎಸ್ ಯಡಿಯೂರಪ್ಪ ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆಂಬ ಸುದ್ದಿ ಜಾಲತಾಣದಲ್ಲಿ ಹರಿದಾಡುತ್ತಿದೆ.

"ಗುರುವಾರ ಮಧ್ಯಾಹ್ನ 12:30ಕ್ಕೆ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಎಸ್‌ವೈ ಪ್ರಮಾಣವಚನಕ್ಕೆ ನೀವು ಬನ್ನಿ" ಎನ್ನುವ ಸಂದೇಶ ಹರಿದಾಡುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News