ರಾಜ್ಯಪಾಲರ ಸಂದೇಶಕ್ಕೆ ಕಾಯುತ್ತಿದ್ದೇವೆ: ಗುಲಾಂ ನಬಿ ಆಝಾದ್

Update: 2018-05-16 11:20 GMT

ಬೆಂಗಳೂರು, ಮೇ 16: ಸರಕಾರ ರಚನೆ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರು ರಾಜ್ಯಪಾಲರಿಗೆ ಮನವಿ ನೀಡಿದ್ದಾರೆ. ನಾವೀಗ ರಾಜ್ಯಪಾಲರ ಸಂದೇಶಕ್ಕೆ ಕಾಯುತ್ತಿದ್ದೇವೆ ಎಂದು ಗುಲಾಂ ನಬಿ ಆಝಾದ್ ಹೇಳಿದ್ದಾರೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ರಚನೆಗೆ ಅಗತ್ಯವಿರುವುದಕ್ಕಿಂತಲೂ ಹೆಚ್ಚು ಶಾಸಕರ ಸಂಖ್ಯೆಯನ್ನು ಹೊಂದಿದೆ. ಆದರೆ ಬಿಜೆಪಿ ಬಳಿ ಅಗತ್ಯ ಸಂಖ್ಯಾಬಲದ ಕೊರತೆ ಇದೆ. ಸುಪ್ರೀಂ ಕೋರ್ಟ್ ಆದೇಶವೂ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬರದಿದ್ದಲ್ಲಿ ಎರಡು ಪಕ್ಷಗಳು ಸೇರಿ ಸರ್ಕಾರ ರಚನೆ ಮಾಡಬಹುದು ಅಂತ ಇದೆ. ಹೀಗಾಗಿ ಸಮಯ ವ್ಯರ್ಥ ಮಾಡದೇ ರಾಜ್ಯಪಾಲರು ಸರ್ಕಾರ ರಚನೆಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಕುದರೆ ವ್ಯಾಪಾರ ನಡೆಯುವ ಸಾಧ್ಯತೆಯಿದ್ದು, ರಾಜ್ಯಪಾಲರು ಇದಕ್ಕೆ ಅವಕಾಶ ನೀಡಬಾರದು. ಅವರು ತಮ್ಮ ಅಧಿಕಾರ ಬಳಸಿ ಕೂಡಲೇ ಸರ್ಕಾರ ರಚನೆ ಮಾಡಲು ಅವಕಾಶ ಕೊಡಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಪಕ್ಷವು ವಿಧಾನ ಸೌಧದ ಗಾಂಧಿ ಪ್ರತಿಮೆಯೆದುರು ಪ್ರತಿಭಟನೆ ಮಾಡಲು ತೀರ್ಮಾನಿಸಿದೆ. ಇದರಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಮುಖಂಡರು, ಜೆಡಿಎಸ್‌ನ ಎಲ್ಲ ನಾಯಕರೂ ಭಾಗವಹಿಸುವರು ಎಂದು ಆಝಾದ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News