ಮುಸ್ಲಿಮ್ ಸೆಂಟ್ರಲ್ ಕಮಿಟಿಯಿಂದ ಪುಸ್ತಕ ವಿತರಣೆ

Update: 2018-05-16 12:38 GMT

ಮಂಗಳೂರು, ಮೇ 16: ದಿ ಮುಸ್ಲಿಮ್ ಸೆಂಟ್ರಲ್ ಕಮಿಟಿ ವತಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕವನ್ನು ವಿತರಿಸಲಾಯಿತು. ಸಭೆಯ ಅಧ್ಯಕ್ಷತೆ ಯನ್ನು ಅಧ್ಯಕ್ಷ ಅಲ್‌ಹಾಜ್ ಕೆ.ಎಸ್.ಮುಹಮ್ಮದ್ ಮಸೂದ್ ವಹಿಸಿದ್ದರು.

ಸಭೆಯಲ್ಲಿ ಉಪಾಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್, ಕಾರ್ಯದರ್ಶಿಗಳಾದ ಹಮೀದ್ ಕುದ್ರೋಳಿ, ಎಂ.ಎ. ಅಶ್ರಫ್, ಹಾಜಿ ಮುಹಮ್ಮದ್ ಬಪ್ಪಳಿಗೆ, ಹಾಜಿ ರಿಯಾಝುದ್ದೀನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News