ಸಂವಿಧಾನ ರಕ್ಷಣೆಗಾಗಿ ಮೈತ್ರಿ ಅನಿವಾರ್ಯ: ಶಾಸಕ ಬಿ.ಸಿ.ಪಾಟೀಲ್

Update: 2018-05-16 13:52 GMT

ಬೆಂಗಳೂರು, ಮೇ 16: ಜಾತ್ಯತೀತ ಶಕ್ತಿಗಳು ಒಂದಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಭಾರತದ ಸಂವಿಧಾನ ರಕ್ಷಣೆಗಾಗಿ ಮೈತ್ರಿ ಅನಿವಾರ್ಯವಾಗಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಇಂದಿಲ್ಲಿ ಹೇಳಿದರು.

ಬುಧವಾರ ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಜಾತ್ಯತೀತ ಶಕ್ತಿಗಳು ಒಂದಾಗಿದ್ದು, ಕೋಮುವಾದಿಗಳ ವಿರುದ್ಧ ಹೋರಾಡಬೇಕಾಗಿದೆ ಎಂದರು.

ಶಾಸಕಾಂಗ ಸಭೆಯಲ್ಲಿ ರೆಸಾರ್ಟ್ ರಾಜಕಾರಣದ ಬಗ್ಗೆ ಯಾವುದೇ ಮಾಹಿತಿಗಳು ನನಗಿಲ್ಲ. ಕಾಂಗ್ರೆಸ್-ಜೆಡಿಎಸ್ ನಾಯಕರು ಬಿಜೆಪಿ ಸೇರುತ್ತಾರೆ ಎನ್ನುವುದು ಎಲ್ಲಾ ಊಹಾಪೋಹ. ಜನ ನಮ್ಮನ್ನು ಕೋಮವಾದಿ ಶಕ್ತಿಗಳ ವಿರುದ್ಧ ಗೆಲ್ಲಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಯಾವುದೇ ನಾಯಕರು ಮತ್ತೊಂದು ಪಕ್ಷಕ್ಕೆ ಹೋಗುವುದು ಸೂಕ್ತವಲ್ಲ ಎಂದು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News