ಹೈಜಾಕ್ ಆಗಲಿ, ಏನೇ ಆಗಲಿ ಕುಮಾರಸ್ವಾಮಿಯೇ ಸಿಎಂ: ಎಚ್.ಡಿ.ರೇವಣ್ಣ

Update: 2018-05-16 14:56 GMT

ಬೆಂಗಳೂರು, ಮೇ 16: ಯಾವುದೇ ಹೈಜಾಕ್ ಆಗಲಿ ಏನೇ ಆಗಲಿ, ಎಚ್.ಡಿ.ಕುಮಾರಸ್ವಾಮಿ ಹೇಳಿದಂತೆ ಸರಕಾರ ರಚನೆಯಾಗುತ್ತದೆ. ಅವರೇ ಸಿಎಂ ಆಗುವುದು ನಿಶ್ಚಿತ ಎಂದು ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದಾರೆ.

ಬುಧವಾರ ಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡರ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಈ ಬಾರಿ ನಮ್ಮ ಪಕ್ಷದಿಂದ ಆಯ್ಕೆಯಾದ 38 ಶಾಸಕರು ಎಲ್ಲಿಯೂ ಹೋಗುವುದಿಲ್ಲ. ನಿಷ್ಠೆಯಿಂದ ಪಕ್ಷದ ಜೊತೆಗಿರುತ್ತಾರೆ. ಕುಮಾರಸ್ವಾಮಿ ಸಿಎಂ ಆಗೋದು ನಿಶ್ಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬೆಟ್ಟೇಗೌಡರ ಭೇಟಿಯ ಬಳಿಕ ಎಚ್.ಡಿ.ರೇವಣ್ಣ ಅವರು ಪದ್ಮನಾಭನಗರದಲ್ಲಿರುವ ಎಚ್.ಡಿ.ದೇವೇಗೌಡರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು. ಈ ವೇಳೆ ದಾಸರಹಳ್ಳಿ ಶಾಸಕ ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News