ವಿಧಾನಸಭಾ ಚುನಾವಣೆ: ರಾಜ್ಯಾದ್ಯಂತ ಠೇವಣಿ ಕಳೆದುಕೊಂಡ ಆಮ್‌ಆದ್ಮಿ

Update: 2018-05-16 15:18 GMT

ಬೆಂಗಳೂರು, ಮೇ 16: ರಾಜ್ಯದಲ್ಲಿ ಮೇ 12 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಎಲ್ಲ ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಳ್ಳುವ ಮೂಲಕ ವಾಷ್ ಔಟ್ ಆಗಿದೆ.

ರಾಜ್ಯಾದ್ಯಂತ 29 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದ ಆಮ್‌ಆದ್ಮಿ ಪಕ್ಷವು ಠೇವಣಿ ಕಳೆದುಕೊಳ್ಳುವ ಮೂಲಕ ತೀವ್ರ ಮುಖಭಂಗ ಅನುಭವಿಸಿದೆ. ಚುನಾವಣೆ ಸ್ಪರ್ಧೆ ನೀಡುವುದು ನಮ್ಮ ಉದ್ದೇಶವಾಗಿತ್ತು. ಆದರೆ, ನಾವು ಎಲ್ಲ ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಳ್ಳಲು ಕಾರಣ ಏನು ಎಂಬುದು ತಿಳಿದಿಲ್ಲ. ನಮಗೆ ಸಾಕಷ್ಟು ಬೆಂಬಲ ವ್ಯಕ್ತವಾಗಿತ್ತು. ಆದರೆ, ಅದು ಮತಗಳಾಗಿ ಪರಿವರ್ತನೆಯಾಗಿಲ್ಲ ಎಂದು ಎಎಪಿ ರಾಜ್ಯ ಸಂಚಾಲಕ ಫೃಥ್ವಿರೆಡ್ಡಿ ವಿಷಾದಿಸಿದ್ದಾರೆ.

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಕೆ.ಜೆ.ಜಾರ್ಜ್ ವಿರುದ್ಧ ಅಬ್ಬರದ ಪ್ರಚಾರ ಮಾಡಿದ್ದ ಪೃಥ್ವಿರೆಡ್ಡಿ ಗಳಿಸಿರುವ ಮತಗಳೇ(1,861) ರಾಜ್ಯದಲ್ಲಿ ಎಎಪಿ ಪಡೆದುಕೊಂಡಿರುವ ಅಧಿಕ ಮತಗಳಾಗಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News