×
Ad

ನೂತನ ಮುಖ್ಯಮಂತ್ರಿಯಾಗಿ ಬಿ ಎಸ್ ಯಡಿಯೂರಪ್ಪ ಪ್ರಮಾಣವಚನ

Update: 2018-05-17 09:25 IST

ಬೆಂಗಳೂರು, ಮೇ 17: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಗುರುವಾರ ಬೆಳಗ್ಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯ್ ವಾಲಾ ಅವರು ಯಡಿಯೂರಪ್ಪರಿಗೆ ಪ್ರಮಾಣವಚನ ಬೋಧಿಸಿದರು. ಹಸಿರು ಶಾಲು ಹೊದ್ದುಕೊಂಡಿದ್ದ ಯಡಿಯೂರಪ್ಪ ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 

ಯಡಿಯೂರಪ್ಪ ಮೂರನೇ ಬಾರಿ ರಾಜ್ಯದ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಪದಗ್ರಹಣ ಕಾರ್ಯಕ್ರಮದಲ್ಲಿ ಬಿಜೆಪಿಯ ನಾಯಕರು ಉಪಸ್ಥಿತರಿದ್ದರು. ನೂತನ ಸಿಎಂಗೆ ಹೂಗುಚ್ಛ ನೀಡಿ ಅಭಿನಂದಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News