×
Ad

ಕಾಂಗ್ರೆಸ್, ಜೆಡಿಎಸ್ ಲಿಂಗಾಯತ ಶಾಸಕರ ಬೆಂಬಲದ ನಿರೀಕ್ಷೆಯಲ್ಲಿ ಬಿಜೆಪಿ

Update: 2018-05-17 10:50 IST

ಬೆಂಗಳೂರು, ಮೇ 17: ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಇನ್ನು 15 ದಿನಗಳಲ್ಲಿ ಬಹುಮತವನ್ನು ಸಾಬೀತುಪಡಿಸಬೇಕಾಗಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರಕಾರದಲ್ಲಿ ಎಚ್‌ಡಿ ಕುಮಾರ ಸ್ವಾಮಿ ಮುಖ್ಯಮಂತ್ರಿಯಾಗುವುದಕ್ಕೆ ಅಸಮಾಧಾನ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಲಿಂಗಾಯತ ಸಮುದಾಯದ ಶಾಸಕರನ್ನು ತನ್ನತ್ತ ಸೆಳೆದುಕೊಳ್ಳಲು ಬಿಜೆಪಿ ರಣನೀತಿ ರೂಪಿಸುತ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್‌ನಲ್ಲಿರುವ ಸುಮಾರು 12ರಷ್ಟು ಲಿಂಗಾಯತ ಶಾಸಕರು ಯಡಿಯೂರಪ್ಪ ಬೆಂಬಲಕ್ಕೆ ನಿಲ್ಲುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಲಿಂಗಾಯತ ಸಮುದಾಯ ಎಂದಿನಂತೆಯೇ ಬಿಜೆಪಿಯನ್ನು ಬೆಂಬಲಿಸಿ ಮತ ಚಲಾಯಿಸಿದೆ.

2007ರಲ್ಲಿ ಕುಮಾರ ಸ್ವಾಮಿ ಅವರು ಯಡಿಯೂರಪ್ಪರಿಗೆ ಮುಖ್ಯಮಂತ್ರಿ ಸ್ಥಾನ ನೀಡಲು ನಿರಾಕರಿಸಿದ ಬಳಿಕ ಒಕ್ಕಲಿಗರು ಹಾಗೂ ಲಿಂಗಾಯತರ ನಡುವೆ ರಾಜಕೀಯ ಅಂತರ ಹೆಚ್ಚಾಗಿತ್ತು.

.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News