×
Ad

ಬಹುಮತವಿಲ್ಲದಿದ್ದರೂ ಬಿಜೆಪಿಗೆ ಆಹ್ವಾನ ನೀಡಿದ್ದು ದುರದೃಷ್ಟಕರ: ಎಚ್.ಡಿ.ರೇವಣ್ಣ

Update: 2018-05-17 18:01 IST

ಬೆಂಗಳೂರು, ಮೇ 17: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಸರಕಾರ ರಚನೆ ಮಾಡುವಷ್ಟು ಬಹುಮತ ಇದ್ದರೂ ರಾಜ್ಯಪಾಲರು ಆಹ್ವಾನ ನೀಡಿಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುರುವಾರ ನಗರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದ ಅನುಸಾರವಾಗಿ ನಡೆದುಕೊಳ್ಳದ ರಾಜ್ಯಪಾಲರು ಬಿಜೆಪಿಗೆ ಆಹ್ವಾನ ನೀಡಿರುವುದು ದುರದೃಷ್ಟಕರ ಎಂದು ಹೇಳಿದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ನಾಯಕರು ಬಹುಮತ ಇದೆ ಎಂದು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟಿದ್ದರು. ಪ್ರಮಾಣ ವಚನ ಸ್ವೀಕಾರಕ್ಕೆ ಆಹ್ವಾನಿಸಿಲ್ಲ ಎಂದು ಹೇಳಿದರು. ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪಅವರು ಪ್ರಮಾಣ ವಚನ ಸ್ವೀಕರಿಸಿದ್ದು ಅವರ ಸರಕಾರ ಇರುತ್ತದೋ ಇಲ್ಲವೋ ಎಂಬುದನ್ನು ಎರಡು ದಿನ ಕಾದು ನೋಡಬೇಕಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News