ಅತ್ತಾವರ: ವಿದ್ಯುತ್ ಟ್ರಾನ್ಸ್‌ಫಾರ್ಮರ್, ಕಾರುಗಳ ಮೇಲೆ ಉರುಳಿದ ಬೃಹತ್ ಮರ
Update: 2018-05-18 09:42 IST
ಮಂಗಳೂರು, ಮೇ 18: ಕಳೆದ ರಾತ್ರಿ ಗುಡುಗು ಮಿಂಚು ಸಹಿತ ಸುರಿದ ಧಾರಾಕಾರ ಮಳೆಗೆ ಬೃಹತ್ ಮರವೊಂದು ವಿದ್ಯುತ್ ಟ್ರಾನ್ಸ್‌ಫಾರ್ಮರ್ ಮೇಲೆ ಉರುಳಿಬಿದ್ದ ಘಟನೆ ನಗರದ ಅತ್ತಾವರ ಬಾಬುಗುಡ್ಡೆ ಎಂಬಲ್ಲಿ ಸಂಭವಿಸಿದೆ.
ಅತ್ತಾವರ ಬಾಬುಗುಡ್ಡೆಯಲ್ಲಿ ಬೃಹತ್ ಮಾವಿನ ಮರವೊಂದು ಟ್ರಾನ್‌ಫಾರ್ಮರ್ ಹಾಗೂ ಅಲ್ಲೇ ನಿಲ್ಲಿಸಲಾಗಿದ್ದ ಕಾರುಗಳ ಮೇಲೆ ಉರುಳಿಬಿದ್ದಿದೆ. ಇದರಿಂದ ನಾಲ್ಕು ಕಾರುಗಳು ಜಖಂಗೊಂಡಿವೆ. ಟ್ರಾನ್ಸ್‌ಫಾರ್ಮರ್ ಹಾಗೂ ಮೂರು ವಿದ್ಯುತ್ ಕಂಬಗಳಿಗೆ ಹಾನಿಯಾಗಿವೆ.
ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮರವನ್ನು ತೆರವುಗೊಳಿಸಿದರು. ಸ್ಥಳೀಯ ಕಾರ್ಪೊರೇಟರ್ ಶೈಲಜಾ ಹಾಗೂ ಸಾರ್ವಜನಿಕರು ತೆರವು ಕಾರ್ಯಾಚರಣೆಗೆ ಸಹಕರಿಸಿದರು.
ಟ್ರಾನ್ಸ್‌ಫಾರ್ಮರ್‌ಗೆ ಹಾನಿಯಾಗಿರುವುದರಿಂದ ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.