ಹೈದರಾಬಾದ್‌ಗೆ ಕಾಂಗ್ರೆಸ್-ಜೆಡಿಎಸ್ ಶಾಸಕರು ಸ್ಥಳಾಂತರ
Update: 2018-05-18 10:27 IST
ಹೈದರಾಬಾದ್, ಮೇ 18: ಬಹುಮತದ ಕೊರತೆ ಎದುರಿಸುತ್ತಿರುವ ಬಿಜೆಪಿಗೆ ಸರಕಾರ ರಚಿಸಲು ರಾಜ್ಯಪಾಲರು ಅವಕಾಶ ನೀಡಿರುವ ಕಾರಣ ಕುದುರೆ ವ್ಯಾಪಾರದಿಂದ ತನ್ನ ಶಾಸಕರನ್ನು ರಕ್ಷಿಸಿಕೊಳ್ಳಲು ಹೆಣಗಾಡುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ತಮ್ಮ ಶಾಸಕರನ್ನು ಬೆಂಗಳೂರಿನಿಂದ ಹೈದರಾಬಾದ್‌ಗೆ ಸ್ಥಳಾಂತರ ಮಾಡಿವೆ.
ಸಂಸದ ಡಿಕೆ ಸುರೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಹೈದರಾಬಾದ್‌ನ ತಾಜ್‌ಕೃಷ್ಣ ಹೊಟೇಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ.