ಫರಂಗಿಪೇಟೆ: ಅಕ್ರಮ ಕಸಾಯಿಖಾನೆಗೆ ದಾಳಿ; ಇಬ್ಬರು ಆರೋಪಿಗಳ ಬಂಧನ

Update: 2018-05-18 05:27 GMT

ಬಂಟ್ವಾಳ, ಮೇ 18: ಅಕ್ರಮ ಕಸಾಯಿಖಾನೆಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ ಘಟನೆ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ.

ಮಾರಿಪಳ್ಳ ನಿವಾಸಿಗಳಾದ ಹಸನಬ್ಬ ಮತ್ತು ಮನ್ಸೂರ್ ಬಂಧಿತ ಆರೋಪಿಗಳು ಎಂದು ಹೇಳಲಾಗುತ್ತಿದೆ. 
ಗುರುವಾರ ರಾತ್ರಿ ಗಸ್ತು ತಿರುಗುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಸ್ಥಳದಲ್ಲಿ 11 ಹಸುವಿನ ಚರ್ಮ ಹಾಗೂ ಒಂದು ಹಸು ಹಾಗೂ ಕರುವನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ದಾಳಿಯಲ್ಲಿ ಪ್ರೊಬೇಶನರಿ ಐಪಿಎಸ್ ಅಕ್ಷಯ್ ಎಂ. ಹಾಕೆ, ವೃತ್ತ ನಿರೀಕ್ಷಕ ಪ್ರಕಾಶ್, ಬಂಟ್ವಾಳ ಗ್ರಾಮಾಂತರ ಠಾಣಾ ಎಸ್ಸೈ ಪ್ರಸನ್ನ, ಸಿಬ್ಬಂದಿ ಬಶೀರ್, ಜನಾರ್ದನ, ಸುರೇಶ್, ನಝೀರ್, ನಾಗನಾಥ್, ವಿಶಾಲಾಕ್ಷಿ ಭಾಗವಹಿಸಿದ್ದರು.‌

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News