ಸುಪ್ರೀಂ ತೀರ್ಪಿನ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಕಚೇರಿಗೆ ಬೀಗ?

Update: 2018-05-18 11:04 GMT

ಬೆಂಗಳೂರು, ಮೇ 18: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯಾವುದೇ ಆಡಳಿತಾತ್ಮಕ ತೀರ್ಮಾನ ಕೈಗೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿರುವ ಸಿಎಂ ಕಚೇರಿಗೆ ಬೀಗ ಜಡಿಯಲಾಗಿದೆ ಎಂದು ತಿಳಿದುಬಂದಿದೆ.

ವಿಶ್ವಾಸ ಮತಯಾಚನೆಗೆ ಸಂಬಂಧಿಸಿ ಇಂದು ಬೆಳಗ್ಗೆ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ ಯಾರಿಗೂ ಹೆಚ್ಚು ಸಮಯಾವಕಾಶ ನೀಡಲು ಸಾಧ್ಯವಿಲ್ಲ. ಶನಿವಾರ ಸಂಜೆ 4 ಗಂಟೆಗೆ ವಿಶ್ವಾಸ ಮತಯಾಚನೆ ನಡೆಯಬೇಕು ಎಂದಿತ್ತು.

ಸದನದ ನಿಯಮದ ಪ್ರಕಾರ ವಿಶ್ವಾಸ ಮತ ನಡೆಯಬೇಕು. ಯಡಿಯೂರಪ್ಪ ಯಾವುದೇ ಪ್ರಮುಖ ಆಡಳಿತಾತ್ಮಕ ನಿರ್ಧಾರ ಕೈಗೊಳ್ಳುವಂತಿಲ್ಲ ಹಾಗೂ ಯಾವುದೇ ಆದೇಶ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಕಚೇರಿಗೆ ಬೀಗ ಜಡಿಯಲಾಗಿದೆ. ವಿಧಾನಸೌಧದ ಸಿಬ್ಬಂದಿ ಸಿಎಂ ಕಚೇರಿಗೆ ಬೀಗ ಜಡಿದಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News