×
Ad

ಬಹುಮತ ಸಾಬೀತುಪಡಿಸುವಲ್ಲಿ ಬಿಎಸ್‌ವೈ ವಿಫಲರಾಗುತ್ತಾರೆ: ಎಚ್.ಡಿ.ರೇವಣ್ಣ

Update: 2018-05-18 17:51 IST

ಬೆಂಗಳೂರು, ಮೇ 18: ನನಗೆ ವಿಶ್ವಾಸವಿದೆ, ಬಹುಮತ ಸಾಬೀತುಪಡಿಸುವಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಫಲರಾಗುತ್ತಾರೆ ಎಂದು ಮಾಜಿ ಸಚಿವ, ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಹೇಳಿದ್ದಾರೆ.

ಶುಕ್ರವಾರ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುಮತ ಸಾಬೀತು ಮಾಡಿ ನಾವು ಸರಕಾರವನ್ನು ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
  
ಶನಿವಾರ ಬಹುಮತ ಸಾಬೀತು ಪಡಿಸಲು ನಮಗೆ ಯಾವುದೇ ಸಮಸ್ಯೆ ಇಲ್ಲ. ನಮ್ಮ ಯಾವುದೇ ಶಾಸಕರು ಅವರೊಂದಿಗೆ ಹೋಗುವುದಿಲ್ಲ ಎಂದು ಹೇಳಿದರು. ಕುಮಾರಸ್ವಾಮಿಯವರು ಆಗಮಿಸಿದ ವೇಳೆ ಅವರನ್ನು ಮಾತನಾಡಿಸಲು ಮುಂದಾದಾಗ, ಈಗಾಗಲೇ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಮಾತನಾಡಿದ್ದೇನೆ ಎಂದಷ್ಟೇ ಹೇಳಿ ಮನೆಯೊಳಗೆ ನಡೆದರು.

ಇದೇ ಸಂದರ್ಭದಲ್ಲಿ ದೇವೇಗೌಡರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಎಚ್.ಡಿ.ರೇವಣ್ಣ, ಕುಮಾರಸ್ವಾಮಿ ಸೇರಿದಂತೆ ಅವರ ಕುಟುಂಬ ಸದಸ್ಯರು ನಿವಾಸಕ್ಕೆ ಆಗಮಿಸಿ ದೇವೇಗೌಡರಿಗೆ ಜನ್ಮದಿನದ ಶುಭಾಶಯ ಕೋರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News