×
Ad

ಎಚ್.ಕೆ.ಪಾಟೀಲ್ ಮೋಸದಿಂದ ಗೆದ್ದಿದ್ದಾರೆ: ಪರಾಜಿತ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಆರೋಪ

Update: 2018-05-18 22:13 IST

ಗದಗ, ಮೇ 18: ಕಾಂಗ್ರೆಸ್ ಅಭ್ಯರ್ಥಿ ಮೋಸದಿಂದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಗದಗ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಪರಾಜಿತ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಆರೋಪಿಸಿದ್ದಾರೆ.

ಶುಕ್ರವಾರ ಗದಗ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕ ಎಚ್.ಕೆ.ಪಾಟೀಲ್ ಮೋಸದಿಂದ ಗೆಲುವು ಸಾಧಿಸಿದ್ದಾರೆ. ಈ ಕುರಿತು ರಾಜ್ಯ ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೆ ದೂರನ್ನು ನೀಡಲಾಗುವುದು ಎಂದು ಹೇಳಿದರು.

ದಾಖಲೆ ಸಮೇತ ಕಾನೂನು ಹೋರಾಟ ನಡೆಸಲಾಗುವುದು. ಎಚ್.ಕೆ.ಪಾಟೀಲರು ಸತ್ತವರ ಹೆಸರಿನಲ್ಲಿ ಮತದಾನ ಮಾಡಿಸಿದ್ದಾರೆ. ಈ ಕುರಿತು ದಾಖಲೆಗಳು ಬಹಿರಂಗವಾಗಿದೆ ಎಂದು ಅನಿಲ್ ಮೆಣಸಿನಕಾಯಿ ಗಂಭೀರ ಆರೋಪ ಮಾಡಿದ್ದಾರೆ.

ಕಾನೂನು ತಜ್ಞ ಹಾಗೂ ಹಣಕಾಸು ಸಚಿವ ಅರುಣ್ ಜೇಟ್ಲಿ ಸಲಹೆ ಮೇರೆಗೆ ಈ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾಗಿದ್ದೇವೆ. ಈ ಕುರಿತು ಕಾನೂನಾತ್ಮಕ ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News