ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಷಯ ಕೋರಿದ ಪ್ರಧಾನಿ

Update: 2018-05-18 18:32 GMT

ಹೊಸದಿಲ್ಲಿ, ಮೇ 18: ಕರ್ನಾಟಕದಲ್ಲಿ ಚುನಾವಣೆಯ ಬಳಿಕದ ಘಟನಾವಳಿಗಳು ನಿರ್ಣಾಯಕ ಘಟ್ಟ ತಲುಪಿರುವ ಮಧ್ಯೆಯೇ, ಪ್ರಧಾನಿ ನರೇಂದ್ರ ಮೋದಿ ಜೆಡಿಎಸ್ ಮುಖಂಡ ಎಚ್.ಡಿ.ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಷಯ ಸಲ್ಲಿಸಿದ್ದಾರೆ.

ಮೇ 18ರಂದು 85ನೇ ವಯಸ್ಸಿಗೆ ಕಾಲಿಟ್ಟಿರುವ ದೇವೇಗೌಡರು 1996ರ ಜೂನ್ 1ರಿಂದ 1997ರ ಎಪ್ರಿಲ್ 21ರವರೆಗೆ ಪ್ರಧಾನ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಕರ್ನಾಟಕದಲ್ಲಿ ಬಿಜೆಪಿಯ ಮುಖಂಡ ಯಡಿಯೂರಪ್ಪರನ್ನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಆಹ್ವಾನ ನೀಡಿರುವ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಜೆಡಿಎಸ್ ಹಾಗೂ ಕಾಂಗ್ರೆಸ್ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News