ಮೇ 19: ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ
Update: 2018-05-19 05:43 IST
ಮಂಗಳೂರು, ಮೇ 19: ಇಂದು (ಶನಿವಾರ) ರಾಜ್ಯದಲ್ಲಿ ಹೊಸ ಸರಕಾರ ವಿಶ್ವಾಸ ಮತ ಯಾಚನೆ ಸಂದರ್ಭ ಮಂಗಳೂರಿನಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತ ವಿಪುಲ್ ಕುಮಾರ್ ಈ ಆದೇಶ ಹೊರಡಿಸಿದ್ದು, ಶನಿವಾರ ಮುಂಜಾನೆ 8 ಗಂಟೆಯಿಂದ ಮೇ 20 ಬೆಳಗ್ಗೆ 10 ಗಂಟೆಯವರೆಗೆ ಈ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.