ದೇರಳಕಟ್ಟೆ: ಸ್ವಚ್ಛತಾ ಅಭಿಯಾನ
Update: 2018-05-19 16:04 IST
ಮಂಗಳೂರು, ಮೇ 19: ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್ (ರಿ) ವತಿಯಿಂದ ದೇರಳಕಟ್ಟೆ ಪರಿಸರದಲ್ಲಿ ಸ್ವಚ್ಚತಾ ಅಭಿಯಾನ ನಡೆಯಿತು.
ಸಂಸ್ಥೆಯ ಅಧ್ಯಕ್ಷ ಹಾಜಿ ಇಲ್ಯಾಸ್ ಡಿ., ಪ್ರಧಾನ ಕಾರ್ಯದರ್ಶಿ ಅಮೀರ್ ಹುಸೈನ್, ಜೊತೆ ಕಾರ್ಯದರ್ಶಿ ಅಬ್ದುಲ್ ಮುತ್ತಲಿಬ್, ದೇರಳಕಟ್ಟೆ ಪಬ್ಲಿಕ್ ಸ್ಕೂಲ್ ಟ್ರಸ್ಟ್ ಅಧ್ಯಕ್ಷ ಹಾಜಿ ಅಬೂಬಕರ್ ನಾಟೆಕಲ್, ಬದ್ರಿಯ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಅಬ್ಬಾಸ್ ಡಿ., ಉಪಾಧ್ಯಕ್ಷ ಅಬ್ದುಲ್ ಅಝೀಝ್ ಎನ್, ಕಾರ್ಯದರ್ಶಿ ಅಬ್ದುಲ್ ಆರ್. ಅಹ್ಮದ್, ಎಸ್ಕೆಎಸ್ಸೆಸ್ಸೆಫ್ ಅಧ್ಯಕ್ಷ ನೌಫಲ್ ಬಿ., ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.