×
Ad

ಮಿತ್ತೂರು: ಕಾರಿಗೆ ಲಾರಿ ಢಿಕ್ಕಿ; ನಾಲ್ವರಿಗೆ ಗಾಯ

Update: 2018-05-19 17:14 IST

ಬಂಟ್ವಾಳ, ಮೇ 19: ನಿಯಂತ್ರಣ ತಪ್ಪಿದ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದು ನಂತರ ರಸ್ತೆಯಲ್ಲೇ ಉರುಳಿ ಬಿದ್ದ ಘಟನೆ ಮಿತ್ತೂರು ಸಮೀಪ ಇದೀಗ ನಡೆದಿದೆ. 

ಅಪಘಾತದಿಂದ ಕಾರಿನಲ್ಲಿದ್ದ ನಾಲ್ಕು ಮಂದಿಗೆ ಗಂಭೀರವಾದ ಗಾಯಗಳಾಗಿವೆ ಎಂದು ತಿಳಿದು ಬಂದಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ. ಕಬ್ಬಿಣದ ಸೀಟ್‌ನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಮಿತ್ತೂರು ಜಂಕ್ಷನ್ ಸಮೀಪದ ಅಪಾಯಕಾರಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News